ಗುಜರಾತ್ ಚುನಾವಣೆಯಲ್ಲಿ ಅಚ್ಚರಿಯ ರೀತಿಯಲ್ಲಿ ಜಯಗಳಿಸಿ ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ರಾಜ್ಯದಲ್ಲಿ 6 ದಿನಗಳ ಕಾಲ ಸುತ್ತಲಿದ್ದಾರೆ.
ಇದೇ ತಿಂಗಳ ತಿಂಗಳ 27 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಮೋದಿ ತೀವ್ರ ರಾಜಕೀಯ ಪೈಪೋಟಿಯನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ದಿನಗಳ ಕಾಲ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ಮೂರು ಹಂತಗಳಲ್ಲಿ ನಡೆಯುವ ಚುನಾವಣೆಗೂ ಬಿಜೆಪಿ ಪರ ಪ್ರಚಾರ ಕೈಗೊಳ್ಳಲು ಮತ್ತೆ ಆಗಮಿಸಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.
ಮೇ ಮೊದಲ ವಾರದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಎಲ್.ಕೆ.ಅಡ್ವಾಣಿ ಎರಡು ದಿನ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇತರ ರಾಷ್ಟ್ರೀಯ ನಾಯಕರೂ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.
|