ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣಾ ಪ್ರಚಾರಕ್ಕೆ ಸೋನಿಯಾ
PTI
ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಅವರು ಆಗಮಿಸುತ್ತಿದ್ದಾರೆ.

ಮೊದಲ ಹಂತದಲ್ಲಿ ನಡೆಯುವ 89 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಅನೇಕ ಕೇಂದ್ರ ಸಚಿವರು, ಪಕ್ಷದ ಹಿರಿಯ ಮುಖಂಡರು ಸೇರಿದಂತೆ ಹಲವು ನಾಯಕರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ ಮೇ ಒಂದಂದು ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಈಗಾಗಲೇ ಪ್ರಣಾಳಿಕೆ ಸಿದ್ಧವಾಗಿದ್ದರೂ, ರಾಜ್ಯ ಉಸ್ತುವಾರಿ ವಹಿಸಿರುವ ಪೃಥ್ವಿರಾಜ್ ಚೌಹಾಣ್ ನಗರಕ್ಕೆ ಇನ್ನು ಆಗಮಿಸಲಿಲ್ಲ. ಈ ಹಿನ್ನೆಲೆಯಲ್ಲಿ ಮೇ ಒಂದರಂದು ಬಿಡುಗಡೆ ಮಾಡಲು ತೀರ್ಮಾನಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಪ್ರತಿ ಹಂತದಲ್ಲೂ ಸಾಕಷ್ಟು ಚರ್ಚೆ ಹಾಗೂ ಸಮಿತಿಗಳ ಅನುಮೋದನೆ ಪಡೆಯಲಾಗಿದೆ. ಹಣದ ಮೇಲೆ ಟಿಕೆಟ್ ಹಂಚಿಕೆಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ ನಂಬಿಕೆ ಮತ್ತು ವಿಶ್ವಾಸವಿಟ್ಟಿರುವ ಆಕಾಂಕ್ಷಿಗಳು ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಟಿಕೆಟ್ ಹಂಚಿಕೆ ಕ್ರಮವನ್ನು ಸಮರ್ಥಿಸಿಕೊಂಡರು.
ಮತ್ತಷ್ಟು
ಮೈಸೂರಲ್ಲಿ ಬಂಧಿತರಿಗೆ ಪಾಕ್ ಉಗ್ರರ ನಂಟು
ವೆಂಕಯ್ಯ ನಾಯ್ಡು ವಿರುದ್ಧ ಕರವೇ ಆಕ್ರೋಶ
ಕಾಂಗ್ರೆಸ್‌ಗೆ ನಿಚ್ಚಳ ಬಹುಮತ: ಸಿದ್ದು
ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯೋಗ
ರಾಜೀನಾಮೆ: ನಾಗಮಾರಪಳ್ಳಿ ಸರದಿ
ಭಯೋತ್ಪಾದನೆ ದಮನಕ್ಕೆ ಬಿಜೆಪಿ ಪರಿಹಾರ: ಮೋದಿ