ಜೆಡಿಎಸ್‌ನಲ್ಲಿ ತಂದೆ ಮಕ್ಕಳ ರಾಜಕಾರಣದಿಂದಾಗಿ ಯಾರೂ ಉಳಿಯುವಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಸಂಸದ ಅನಂತ ಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಚುನಾವಣಾ ನಂತರದ ಮೈತ್ರಿಗಾಗಿ ಈಗಾಗಲೇ ಗುಪ್ತ ಸಮಾಲೋಚನೆ ನಡೆಸುತ್ತಿದೆ. ಬಿಜೆಪಿ ಬಹುಮತ ಪಡೆಯುವುದನ್ನು ತಪ್ಪಿಸಲು ಇವೆರಡು ಪಕ್ಷಗಳು ಒಂದೇ ಅಜಾಂಡದ ಮೇಲೆ ಕಾರ್ಯ ನಿರ್ವಹಿಸುತ್ತಿದೆ. ಆದರೆ ಮುಂದಿನ ಚುನಾವಣೆಯಲ್ಲಿ ಇದ್ಯಾವುದೂ ನಡೆಯುವುದಿಲ್ಲ ಎಂದು ತಿಳಿಸಿದರು.
ಜೆಡಿಎಸ್ ಹಾಗೂ ಸಮಾಜವಾದಿ ಪಕ್ಷಗಳ ಮುಖಂಡರು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗುತ್ತದೆ ಎಂದು ಹೇಳುವ ಮೂಲಕ ಕರ್ನಾಟಕ ಜನತೆಯ ಸ್ವಾಭಿಮಾನವನ್ನು ಕೆಣಕುತ್ತಿದ್ದಾರೆ ಎಂದ ಅವರು, ಬಿಜೆಪಿಯನ್ನು ಬಹುಮತದೊಂದಿಗೆ ಆರಿಸುವ ಮೂಲಕ ವಿರೋಧಿ ಪಕ್ಷಗಳಿಗೆ ಜನತೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುತೂಹಲ ಮೂಡಿಸಿರುವ ಶಿಕಾರಿಪುರ ಕ್ಷೇತ್ರದ ಕುರಿತು ಮಾತನಾಡಿದ ಅವರು, ಶಿಕಾರಿಪುರದಲ್ಲಿ ಧರ್ಮಯುದ್ಧ ನಡೆಯುತ್ತಿದ್ದು, ಅಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಲಿದೆ ಎಂದು ತಿಳಿಸಿದರು.
|