ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಾರೊಂದಿಗೂ ಜೆಡಿಎಸ್ ಮೈತ್ರಿ ಇಲ್ಲ
ಜೆಡಿಎಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆಗಿಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿರುವ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ತಮ್ಮ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಮೇಲೆ ಹರಿಹಾಯ್ದ ಅವರು, ಎರಡು ಪಕ್ಷಗಳು ಅಧಿಕಾರಕ್ಕಾಗಿ ಒಳಗೊಳಗೆ ಕುತಂತ್ರ ಮಾಡುತ್ತಿದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೇ ತಮ್ಮನ್ನು ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಿರಿಯ ಮುಖಂಡ ಡಿ. ಮಂಜುನಾಥ್ ಪುತ್ರನಿಗೆ ಟಿಕೆಟ್ ಕೊಡಲು ಕಾರ್ಯಕರ್ತರ ವಿರೋಧ ಇದ್ದುದರಿಂದ ಟಿಕೆಟ್ ನೀಡಿಲ್ಲ. ಆದರೆ ಹೇಗಾದರೂ ಮಾಡಿ ಅವರನ್ನು ಪಕ್ಷಕ್ಕೆ ಮತ್ತೆ ಕರೆಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಎರಡು ದಿನಗಳ ರಾಮನಗರ ಪ್ರವಾಸದಲ್ಲಿರುವ ಕುಮಾರಸ್ವಾಮಿ, ಆ ಬಳಿಕ ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ಮತ್ತಷ್ಟು
ಎಸ್.ಎಸ್. ಮಲ್ಲಿಕಾರ್ಜುನ್‌ಗೆ ಟಿಕೆಟ್
ಸಮಾಜವಾದಿ ಪಕ್ಷದ ಪ್ರಣಾಳಿಕೆ ಬಿಡುಗಡೆ
ಶಿಕಾರಿಪುರದಲ್ಲಿ ಧರ್ಮಯುದ್ಧ: ಅನಂತಕುಮಾರ್
ದೇವೇಗೌಡರ ಕೊನೆಯ ಆಸೆ...
ಚುನಾವಣಾ ಪ್ರಚಾರಕ್ಕೆ ಸೋನಿಯಾ
ಮೈಸೂರಲ್ಲಿ ಬಂಧಿತರಿಗೆ ಪಾಕ್ ಉಗ್ರರ ನಂಟು