ರಾಜ್ಯಪಾಲರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರು ಕಾಂಗ್ರೆಸ್ ಪಕ್ಷದ ಅಣತಿಯಂತೆ ಕಾರ್ಯಕೈಗೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ನೈಸ್ ಕಂಪೆನಿಯ ಕಡತಕ್ಕೆ ಸಹಿ ಹಾಕುತ್ತಿರುವುದು ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ? ಎಂದು ಪ್ರಶ್ನಿಸಿದರಲ್ಲದೆ, ಕಾಂಗ್ರೆಸ್ ಪಕ್ಷದ ನಾಯಕರು ರಾಜಾರೋಷವಾಗಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಅಬ್ಬರದ ಪ್ರಚಾರದಲ್ಲಿ ತೊಡಗಿದರೂ, ಆಯೋಗ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ವಿಷಾದನೀಯ ಎಂದರು.
ಆದರೆ ಆಯೋಗ ಉಳಿದ ಪಕ್ಷಗಳಿಗೆ ಅದರಲ್ಲೂ ಜೆಡಿಎಸ್‌ಗೆ ಮಾತ್ರ ಕಟ್ಟು ನಿಟ್ಟಿನ ಚುನಾವಣಾ ನೀತಿ ಸಂಹಿತೆಯನ್ನು ಜಾರಿ ಮಾಡಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆಯೋಗದ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.
ನಂಜನಗೂಡಿನಲ್ಲಿ ತಮ್ಮ ಕಾರು ವಶಪಡಿಸಿಕೊಂಡಿರುವ ಬಗ್ಗೆ ವಿವರಿಸಿದ ಅವರು, ಅನುಮತಿ ಪಡೆದ ಕಾರನ್ನೇ ಹಿಂಬಾಲಿಸಿದ ಆಯೋಗದ ವೀಕ್ಷಕರು ಅದನ್ನು ವಶಪಡಿಸಿ, ಅಸಹ್ಯಕರ ವಾತಾವರಣವನ್ನು ಸೃಷ್ಟಿಸಿದರು ಎಂದು ತಿಳಿಸಿದರು.
|