ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಧರ್ಮ ಸಿಂಗ್ ಹಾಗೂ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಕ್ಷೇತ್ರದಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಈ ಇಬ್ಬರೂ ನಾಯಕರು ಒಂಭತ್ತನೇ ಬಾರಿಗೆ ನಾಮಪತ್ರ ಸಲ್ಲಿಸುವ ಮೂಲಕ ದಾಖಲೆ ನಿರ್ಮಿಸಲು ಸಿದ್ಧವಾಗಿದ್ದಾರೆ. ಧರ್ಮಸಿಂಗ್ ಜೇವರ್ಗಿ ಕ್ಷೇತ್ರದಿಂದ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಖರ್ಗೆ ಚಿತ್ತಾಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮಸಿಂಗ್, ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿದೆ. ಈ ನಿಟ್ಟಿನಲ್ಲಿ ಈ ಬಾರಿಯೂ ಜನತೆ ತಮ್ಮನ್ನು ಬಾರಿ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ನುಡಿದರು.
ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಮಾಡಿರುವ ತಪ್ಪನ್ನು ಮತ್ತೆ ಮಾಡಲು ಮತದಾರರು ಬಯಸುವುದಿಲ್ಲ ಆದ್ದರಿಂದ ಈ ಬಾರಿ ಕಾಂಗ್ರೆಸ್ಗೆ ನಿಶ್ಚಲ ಬಹುಮತ ಪಡೆಯಲಿದೆ ಎಂದು ಅವರು ತಿಳಿಸಿದರು.
|