ದ್ವಿತೀಯ ಪಿಯುಸಿ ಫಲಿತಾಂಶವು ಶುಕ್ರವಾರ ಬಿಡುಗಡೆಗೊಂಡಿದ್ದು, ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ವೆಬ್‌ದುನಿಯಾದಲ್ಲಿ ಈ ಫಲಿತಾಂಶ ಲಭ್ಯವಿದ್ದು, ಇಲ್ಲಿ ಕ್ಲಿಕ್ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳ ವಿವರ ಪಡೆಯಬಹುದಾಗಿದೆ.
ಈ ಬಾರಿ ಶೇ. 41.31ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟು 5,72,197 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2,36,364 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಮೊದಲ ಸ್ಥಾನವನ್ನು ಪಡೆದುಕೊಂಡರೆ, ಉಡುಪಿ ಎರಡನೇ ಸ್ಥಾನದಲ್ಲಿದೆ. ಅಂತೆಯೇ ಕೊಡಗು ಮೂರನೇ ಸ್ಥಾನವನ್ನು ಹೊಂದಿದೆ. ಫಲಿತಾಂಶದಲ್ಲಿ ಬೀದರ್ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಈ ಮಧ್ಯೆ ಮರು ಪರೀಕ್ಷೆ ಬರೆಯುವ ನಿಗದಿಯನ್ನು ಇಲಾಖೆಯು ಘೋಷಿಸಿದ್ದು, ಬರೆಯುವ ವಿದ್ಯಾರ್ಥಿಗಳು ಈ ತಿಂಗಳ 17ರ ಒಳಗಾಗಿ ಅರ್ಜಿ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.
|