ರಾಮಭಕ್ತರು ಅಯೋದ್ಯೆಯಲ್ಲಿ ಹುಂಡಿ ಕದ್ದಿದ್ದಾರೆಂಬ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಬಿಜೆಪಿಯ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಭಕ್ತರ ಮೇಲೆ ಮಾಡಿರುವ ಆರೋಪದ ಕುರಿತು ಒಂದೇ ವೇದಿಕೆಯಲ್ಲಿ ಚರ್ಚೆಯಾಗಬೇಕು. ಆರೋಪವನ್ನು ಅವರು ಸಾಬೀತು ಪಡಿಸಲಿ. ಇಲ್ಲದಿದ್ದರೆ ಸಾರ್ವಜನಿಕವಾಗಿ ಮೊಯ್ಲಿ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ಚುನಾವಣಾ ಸಮೀಕ್ಷೆ ಪ್ರಸಾರ ಮಾಡಿರುವ ಕುರಿತು ವಿರೋಧ ವ್ಯಕ್ತಪಡಿಸಿದ ಅವರು, ಚುನಾವಣಾ ವರದಿ ಸಮೀಕ್ಷೆಗಳು ಸರಿಯಿಲ್ಲ. ಇದು ಪಕ್ಷಪಾತದ ವರದಿಯಾಗಿದ್ದು, ಸಮೀಕ್ಷೆ ವರದಿ ನಿಷೇಧ ಮಾಡುವಂತೆ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನೀಡುವುದಕ್ಕೆ ಈಗಾಗಲೇ ಜನತೆ ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಇಂತಹ ಸಮೀಕ್ಷೆಗಳು ಜನರ ಹಾದಿ ತಪ್ಪಿಸುತ್ತದೆ ಎಂದು ಅವರು ಆರೋಪಿಸಿದರು.
|