ದೇಶದಲ್ಲಿ ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ಮೊದಲ ಹಂತದ ಚುನಾವಣಾ ಪ್ರಚಾರಕ್ಕಾಗಿ ಭಾನುವಾರ ನಗರಕ್ಕೆ ಆಗಮಿಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ದೇಶದಲ್ಲಿ ಆಗುತ್ತಿರುವ ಬೆಲೆ ಏರಿಕೆ, ಆಂತರಿಕ ಭದ್ರತೆ ವಿಚಾರ, ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಯುಪಿಎ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಪ್ರಕಟಿಸಲಾಗಿರುವ ಕೃಷಿ ಯೋಜನೆ ಹಾಗೂ ಸಾಲಮನ್ನಾ ಯೋಜನೆ ಸಮರ್ಪಕವಾಗಿ ಬಳಸಿಲ್ಲ. ಸಾಲಮನ್ನಾ ಪ್ರಕಟಿಸಿದ ಬಳಿಕವೂ ರೈತರ ಆತ್ಮಹತ್ಯೆ ಮುಂದುವರೆಯುತ್ತಲೇ ಇದೆ. ಜನತೆಗೆ ಅಭಿವೃದ್ದಿಯಾಗುವಂತಹ ಸಮಗ್ರ ಯೋಜನೆಯನ್ನು ಜಾರಿ ಮಾಡುವಂತೆ ಕೇಂದ್ರ ಸರ್ಕಾರವನ್ನು ರಾಜನಾಥ್ ಸಿಂಗ್ ಆಗ್ರಹಿಸಿದರು.
ಕರ್ನಾಟಕದಲ್ಲಿ ಬಿಜೆಪಿಗೆ ಪೂರಕ ಬಹುಮತ ಬರುವುದರಲ್ಲಿ ಸಂಶಯವಿಲ್ಲ ಎಂದ ಅವರು, ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ತಿಳಿಸಿದರು.
|