ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಕ್ಕೀಗ ರಾಷ್ಟ್ರ ನಾಯಕ/ಕಿಯರ ದಂಡು
ಮೊದಲ ಹಂತದ ಚುನಾವಣೆ
ಮೊದಲ ಹಂತದ ವಿಧಾನಸಬಾ ಚುನಾವಣೆ ಕ್ಷಣಗಣನೆ ಪ್ರಾರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ರಾಷ್ಟ್ರ ನಾಯಕರು ಒಬ್ಬರಾದ ನಂತರ ಮತ್ತೊಬ್ಬರು ಪಕ್ಷದ ಪರ ಪ್ರಚಾರ ನಡೆಸಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈಗ ರಾಷ್ಟ್ರೀಯ ನಾಯಕಿಯ ಸರದಿ. ಈಗಾಗಲೇ ಬಿಜೆಪಿ ಪ್ರಚಾರಕ್ಕಾಗಿ ಸುಷ್ಮಾ ಸ್ವರಾಜ್ ಅವರು ರಾಜ್ಯಕ್ಕೆ ಅನೇಕ ಸಲ ಬಂದು ಹೋಗಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಇಂದು (ಸೋಮವಾರ) ಚಾಮರಾಜನಗರದಿಂದ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದ್ದಾರೆ. ಮೊದಲು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿರುವ ಮಾಯಾವತಿ, ಆ ಬಳಿಕ ರಾಜ್ಯಾದ್ಯಂತ ವಿವಿಧ ಕಡೆಗಳಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯಪ್ರಧಾನ ಕಾರ್ಯದರ್ಶಿ ಪಿ.ಜಿ.ಆರ್. ಸಿಂಧ್ಯಾ ತಿಳಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಶೀಘ್ರದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಈಗಾಗಲೇ ಕೆಪಿಸಿಸಿ ತಿಳಿಸಿದೆ.

ಈ ಮಧ್ಯೆ, ಸಿಪಿಎಂನ ಪೋಲಿಟ್ ಬ್ಯುರೋ ಸದಸ್ಯೆ ಬೃಂದಾ ಕ್ಯಾರೆಟ್ ಕೂಡ ನಗರಕ್ಕೆ ಆಗಮಿಸಿದ್ದು, ಪಕ್ಷದ ಪರ ಪ್ರಚಾರ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದ ತಪ್ಪು ಆರ್ಥಿಕ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಆರೋಪಿಸಿದರು. ಎರಡನೇ ಹಂತದ ಚುನಾವಣೆಯಲ್ಲಿ ಬರುವ ಕ್ಷೇತ್ರಗಳಲ್ಲಿಯೂ ಪ್ರಚಾರ ಕೈಗೊಳ್ಳಲಿರುವ ಬೃಂದಾ ಕ್ಯಾರೆಟ್, ನಾಳೆ ಮಂಗಳೂರಿನಲ್ಲಿ ನಡೆಯುವ ಪಕ್ಷದ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮತ್ತಷ್ಟು
ಸಾರಾಯಿ ಜಾರಿ ಕಾಂಗ್ರೆಸ್ ಹೇಳಿಕೆಗೆ ಖಂಡನೆ
ಎಸ್ಸೆಸ್ಸೆಲ್ಸಿ: ಶೇ.69.63 ವಿದ್ಯಾರ್ಥಿಗಳು ತೇರ್ಗಡೆ
ಭಯೋತ್ಪಾದನೆ ನಿಗ್ರಹದಲ್ಲಿ ಯುಪಿಎ ವಿಫಲ: ರಾಜನಾಥ್
ಮೊಯ್ಲಿ ಚರ್ಚೆಗೆ ಬರಲಿ: ಯಡಿಯೂರ್ ಸವಾಲು
ಹುಬ್ಬಳ್ಳಿಯಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ
ಸ್ತ್ರೀಯಾಧಾರಿತ ಚುನಾವಣಾ ಪ್ರಣಾಳಿಕೆ: ಕುಮಾರ ಸ್ವಾಮಿ