ಆಂಧ್ರ ಪ್ರದೇಶಕ್ಕೆ ಸೇರಿದ ಬಸ್ ಹಾಗೂ ಮಾರುತಿ ವ್ಯಾನ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರನ್ನು ಲೋಕೇಶ್, ಶೋಭಾ, ವಿಜಯ್, ದರ್ಶನ್ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಮಗುವೊಂದು ತೀವ್ರವಾಗಿ ಗಾಯಗೊಂಡಿದೆ. ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು(ಸೋಮವಾರ) ಬೆಳಿಗ್ಗೆ 10.30ರ ಸುಮಾರಿಗೆ ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುತ್ತಿದ್ದ ಮಾರುತಿವ್ಯಾನ್ಗೆ ಕೋಲಾರದ ಟಮಕ ಬಳಿ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಸ್ ಚಾಲಕನ ಬೇಜವ್ದಾರಿಯಿಂದಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
|