ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ 119ರಿಂದ 129 ಸ್ಥಾನಗಳನ್ನು ಪಡೆಯುವುದು ಖಚಿತ ಎಂದು ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಇಂದು (ಸೋಮವಾರ) ಮಾತನಾಡಿದ ಅವರು, ಪಕ್ಷ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಈ ಅಂಶ ಸ್ಪಷ್ಟವಾಗಿದ್ದು, ಬಿಜೆಪಿ 119ರಿಂದ 129 ಸ್ಥಾನ ಗಳಿಸಿದರೆ, ಕಾಂಗ್ರೆಸ್‌ಗೆ 60ರಿಂದ 65 ಹಾಗೂ ಜೆಡಿಎಸ್ಗೆ 20ಕ್ಕಿಂತ ಕಡಿಮೆ ಸ್ಥಾನಗಳು ದೊರಕಲಿವೆ ಎಂಬುದು ಸಮೀಕ್ಷೆಯಲ್ಲಿ ಸ್ಪಷ್ಟವಾಗಿದೆ ಎಂದು ತಿಳಿಸಿದರು.
ಈವರೆಗೆ ಕೆಲವು ಖಾಸಗಿ ಮಾಧ್ಯಮಗಳು ನಡೆಸಿದ ಸಮೀಕ್ಷೆಗಳು ಸತ್ಯಕ್ಕಿಂತ ದೂರವಾಗಿತ್ತು. ಈ ನಿಟ್ಟಿನಲ್ಲಿ ಬಿಜೆಪಿಯೇ ಆಂತರಿಕ ಸಮೀಕ್ಷೆ ನಡೆಸಿ, ಈ ಅಂಶವನ್ನು ಸ್ಪಷ್ಟಪಡಿಸಿಕೊಂಡಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮೇಲೆ ಹರಿಹಾಯ್ದ ಅವರು, ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಆರೋಪಿಸಿದರು.
ಅಲ್ಲದೆ, ರೈತರ ಆತ್ಯಹತ್ಯೆ, ಹೆಚ್ಚುತ್ತಿರುವ ಹಣದುಬ್ಬರ ಹಾಗೂ ವ್ಯಾಪಕ ಭಯೋತ್ಪಾದಕ ಚಟುವಟಿಕೆಗೆ ಕಾರಣವಾಗಿರುವ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಸೋಲನ್ನು ಅನುಭವಿಸುವುದು ಖಚಿತ ಎಂದು ಅವರು ತಿಳಿಸಿದರು.
|