ಮೂರನೇ ಹಾಗೂ ಕೊನೆ ಹಂತದ ವಿಧಾನಸಭಾ ಚುನಾವಣೆಗೆ ಸಲ್ಲಿಸಿರುವ ನಾಮಪತ್ರಗಳ ಪರೀಶೀಲನೆ ಇಂದು(ಸೋಮವಾರ) ನಡೆಯಿತು.
ಮುಂಬೈ, ಕರ್ನಾಟಕ, ಹೈದರಾಬಾದ್-ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಸೇರಿದಂತೆ ಒಟ್ಟು 8 ಜಿಲ್ಲೆಗಳ 69 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರೀಶೀಲನೆ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕಕಾಲಕ್ಕೆ ಜರುಗಿತು.
ಮೇ 22ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು, ನಾಮಪತ್ರವನ್ನು ಹಿಂದಕ್ಕೆ ಪಡೆಯಲು ಇದೇ ಬುಧವಾರದವರೆಗೆ ಕಾಲಾವಕಾಶ ನೀಡಲಾಗಿದೆ.
ಹಾಗೆಯೇ, ಎರಡನೇ ಹಂತದ ಚುನಾವಣೆಯಲ್ಲಿ ಶಿಕಾರಿಪುರದಲ್ಲಿನ ಮಾಜಿ ಮುಖ್ಯಮಂತ್ರಿಗಳ ಜಿದ್ದಾಜಿದ್ದಿನ ಸ್ಪರ್ಧೆ ನಡೆಯಲಿದ್ದರೆ, ಮೂರನೇ ಹಂತದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಧರ್ಮಸಿಂಗ್ ಹಾಗೂ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಣದಲ್ಲಿದ್ದಾರೆ.
|