ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕೇ ದಿನ ಬಾಕಿ ಇರುವಂತೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರವನ್ನು ಮುಂದುವರೆಸಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಕೇಂದ್ರ ಸಚಿವರೂ ಸೇರಿದಂತೆ ಹೊರರಾಜ್ಯದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಇಂದು (ಮಂಗಳವಾರ) ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ತೆಲುಗು ಭಾಷಿಕರ ಪ್ರಾಬಲ್ಯವಿರುವ ಪಾವಗಡ, ಗೌರಿಬಿದನೂರು, ಬಾಗೆಪಲ್ಲಿ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್‌ಗಳಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ.
ಅಲ್ಲದೆ, ನಾಳೆ ರಾಜ್ಯಕ್ಕೆ ಆಗಮಿಸಲಿರುವ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಗುಲಾಂ ನಬಿ ಅಜಾದ್, ರಾಮನಗರ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ಹಾಗೂ ಮೈಸೂರಲ್ಲಿ ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.
ಅಲ್ಲದೆ, ಕೇಂದ್ರ ಸಚಿವೆ ಅಂಬಿಕಾ ಸೋನಿ ಕೂಡ ಕಾಂಗ್ರೆಸ್ ಪರ ಪ್ರಚಾರ ನಡೆಸಲು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಮೈಸೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಕೊಡಗಿನಲ್ಲಿ ಪ್ರಚಾರ ಕೈಗೊಳ್ಳಲಿದ್ದರೆ, ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸೀಗ್ ವಾಘೇಲಾ ಹಾಸನದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಹಾಗೆಯೇ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ಕೂಡ ರಾಜ್ಯ ಆಗಮಿಸಲಿದ್ದಾರೆ.
|