ಜೆಡಿಎಸ್ ಪಕ್ಷದ ಬೆಂಬಲವಿಲ್ಲದೆ ರಾಜ್ಯದಲ್ಲಿ ಯಾವ ಪಕ್ಷವೂ ಅಧಿಕಾರ ನಡೆಸುವುದು ಅಸಾಧ್ಯ ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈಗ ಇನ್ನೊಂದು ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಇಂದು (ಮಂಗಳವಾರ) ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಘೋಷಿಸಿದ್ದಾರೆ.
ರಾಜ್ಯದಲ್ಲಿ ಸಾರಾಯಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಮುಖಂಡರ ಹೇಳಿಕೆಯನ್ನು ಪರೀಶೀಲಿಸಿದಾಗ ಕಾಂಗ್ರೆಸ್‌ನಲ್ಲಿ ಸಾರಾಯಿ ಲಾಭಿಯ ಕೈವಾಡವಿರುವುದು ಸ್ಪಷ್ಟವಾಗುತ್ತದೆ ಎಂದು ಅವರು ತಿಳಿಸಿದರು.
ಜ್ಯೋತಿಷ್ಯರ ಮಾತಿನಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ರೇವಣ್ಣನವರ ಎದುರಾಗಿ ಮಹಿಳೆಯರನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ದೇವೇಗೌಡರು, ಕಾಂಗ್ರೆಸ್ ಇದರಿಂದ ಭ್ರಮನಿರಸನಕ್ಕೆ ಒಳಗಾಗಲಿದೆ ಎಂದು ತಿಳಿಸಿದರು.
|