ಕೇವಲ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಉದ್ದೇಶದಿಂದ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಜನತೆಯ ಮನಸ್ಸನ್ನು ಒಲಿಸಿಕೊಳ್ಳುವ ದೃಷ್ಟಿಯಿಂದ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ದೇವೇಗೌಡರು ಹಾದಿ ತಪ್ಪಿಸುತ್ತಿದ್ದಾರೆ ಎಂದು ತಿಳಿಸಿದರು.
ತಾವು ಉಪಮುಖ್ಯಮಂತ್ರಿಯಾಗಿದ್ದ ರೈತರಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ ನೀಡುವುದಕ್ಕೆ ಒಪ್ಪಿಕೊಳ್ಳದ ದೇವೇಗೌಡರು ಇಂದು ತಮ್ಮ ಪ್ರಣಾಳಿಕೆಯ ಮೂಲಕ ಜನತೆಯನ್ನು ತಪ್ಪು ದಾರಿಗೆ ಒಯ್ಯುತ್ತಿದ್ದಾರೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಈಗಾಗಲೇ ಸಾರಾಯಿ ಪುನಃ ಜಾರಿಗೊಳಿಸುವುದನ್ನು ಈಗಾಗಲೇ ಸ್ಪಷ್ಟಪಡಿಸಿದೆ. ಇದನ್ನು ನಮ್ಮ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಗಮನಿಸಬೇಕು. ಇಂತಹ ಅಪ್ರಬುದ್ಧ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಜನತೆ ತಿರಸ್ಕರಿಸಬೇಕೆಂದು ಅವರು ತಿಳಿಸಿದರು.
|