ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 120ಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಸಾಲಮನ್ನಾ, ಸಾರಾಯಿ ಹಾಗೂ ಲಾಟರಿ ನಿಷೇಧ- ಈ ಎಲ್ಲಾ ಕಾರ್ಯಕ್ರಮಗಳನ್ನು ನಾವು ಮಾಡಿದ್ದು ಎಂದು ಬಿಜೆಪಿ ಹೇಳಿಕೊಂಡು ಬರುತ್ತಿದೆ. ಅದರೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೀದರ್ ಜಿಲ್ಲೆಯಲ್ಲಿ ರೈತರು ಆತ್ಯಹತ್ಯೆ ಮಾಡಿಕೊಂಡಾಗ ಸಾಲಮನ್ನಾ ಮಾಡಬೇಕೆಂಬ ದೃಢ ನಿರ್ಧಾರಕ್ಕೆ ಬಂದೆ ಎಂದು ತಿಳಿಸಿದರು.
20 ತಿಂಗಳ ಸಮ್ಮಿಶ್ರ ಸರ್ಕಾರದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿದ್ದೇನೆ. ಆದರೆ ಇದ್ಯಾವುದೂ ಅರಿಯದ ಬಿಜೆಪಿ ಮುಖಂಡರಾದ ವೆಂಕಯ್ಯನಾಯ್ಡು ಅವರು ಅನಾಗರಿಕರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿದರು.
ಜೆಡಿಎಸ್‌ನಲ್ಲಿದ್ದ ಮುಖಂಡರುಗಳು ಪಕ್ಷ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಆದರೆ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಪಶ್ಚಾತ್ತಾಪ ಪಡೆಬೇಕಾಗುತ್ತದೆ ಎಂದು ಅವರು ತಿಳಿಸಿದರು.
|