ತಮ್ಮ ರಾಜಕೀಯ ವೈರಿಯಾಗಿರುವ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರವಾದ ವರುಣಾದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಚ್.ವಿ. ಕೃಷ್ಣಸ್ವಾಮಿ ಪರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರಚಾರ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ತಿಳಿಸಿದ ಅಂಶವನ್ನು ಚಾಚೂ ತಪ್ಪದೆ ಜಾರಿಗೆ ತರಲಾಗುವುದು. ಇತರ ಪಕ್ಷಗಳಂತೆ ದಿನಕ್ಕೊಂದು ಆಶ್ವಾಸನೆಗಳನ್ನು ನೀಡುವುದಿಲ್ಲ ಎಂದು ತಿಳಿಸಿದರು.
ತಮ್ಮ ಪಕ್ಷ ಸಾರಾಯಿ ನಿಷೇಧವನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಂಪೂರ್ಣ ಪಾನ ನಿಷೇಧ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಪಾನ ನಿಷೇಧದ ಸುಳಿವನ್ನು ಅವರು ನೀಡಿದರು.
ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರೇ ಕಾರಣ ಎಂದು ಗೌಡ ಈ ಸಂದರ್ಭದಲ್ಲಿ ಅವರು ತಿಳಿಸಿದರು.
|