ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ರಾಜ್ಯದ ಅಭಿವೃದ್ದಿ ಸಂಪೂರ್ಣ ಕುಂಠಿತಗೊಂಡಿದ್ದು, ರಾಜ್ಯವನ್ನು 20 ವರ್ಷ ಹಿಂದಕ್ಕೆ ಕೊಂಡೊಯ್ದಿದ್ದಾರೆ ಎಂದು ಕಾಶ್ಮೀರದ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಟೀಕಿಸಿದ್ದಾರೆ.
ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪರಸ್ಪರ ಕಿತ್ತಾಟದಲ್ಲಿಯೇ ಕಾಲ ಕಳೆದಿದ್ದರಿಂದ ರಾಜ್ಯದಲ್ಲಿ ದಿಢೀರ್ ಚುನಾವಣೆಗೆ ಕಾರಣವಾಯಿತು ಎಂದು ತಿಳಿಸಿದರು.
ಹಿಂದೆ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ವಿಜ್ಞಾನ ತಂತ್ರಜ್ಞಾನದಲ್ಲಿ ಕರ್ನಾಟಕ ರಾಜ್ಯ ಹೊಸ ಮೈಲುಗಲ್ಲನ್ನು ಸ್ಥಾಪಿಸಿತ್ತು. ಅಲ್ಲದೆ, ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಗೊಳ್ಳವುದಕ್ಕೆ ಮೂಲ ಕಾರಣವಾದ ಕಾಂಗ್ರೆಸ್, ದೇಶದ ಪ್ರತಿಯೊಂದು ಸಮಾಜದ ಎಲ್ಲ ಧರ್ಮಗಳ ಉದ್ದೇಶವನ್ನು ಅರ್ಥ ಮಾಡಿಕೊಂಡು ಅಭಿವೃದ್ದಿಗಾಗಿ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಅಭಿವೃದ್ದಿಗಾಗಿ ಶ್ರಮಿಸಿದ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯೂ ಗೆಲ್ಲಿಸಬೇಕೆಂದು ಅವರು ಮತದಾರರಲ್ಲಿ ಮನವಿ ಮಾಡಿದರು.
|