ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ. ಸುರೇಶ್ ಗೌಡ ಸೇರಿದಂತೆ ಇತರ ನಾಲ್ವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಯಿತು.
ಚುನಾವಣಾಧಿಕಾರಿಗಳ ಮೇಲೆ ದೌರ್ಜನ್ಯ ನಡೆಸಲು ಪ್ರಯತ್ನಿಸಿ ಚುನಾವಣಾ ನೀತಿ ಸಂಹಿತಿ ಉಲ್ಲಂಘನೆ ಮಾಡಿದರು ಎನ್ನುವ ಕಾರಣದಿಂದಾಗಿ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಿರಿವರದಲ್ಲಿ ಮಧ್ಯರಾತ್ರಿ 1 ಗಂಟೆಯ ಸಮಯದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಚುನಾವಣಾಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡಲು ಹೋದಾಗ ಸುರೇಶ್ ಬೆಂಬಲಿಗರು ಅಡ್ಡಿ ಪಡಿಸಿದರು.
ಈ ಹಿನ್ನೆಲೆಯಲ್ಲಿ ಸುರೇಶ್ ಬೆಂಬಲಿಗರಾದ ರಾಜಣ್ಣ, ನರಸಿಂಹಮೂರ್ತಿ ತಿಮ್ಮಪ್ಪ ಇವರುಗಳನ್ನು ಚುನಾವಣಾ ಅಧಿಕಾರಿಗಳು ನೀಡಿದ ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಐವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
|