ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
89 ಕ್ಷೇತ್ರಗಳಿಗೆ 953 ಅಭ್ಯರ್ಥಿಗಳು: ಮತದಾನ ಆರಂಭ
ಕರ್ನಾಟಕ ರಾಜ್ಯ ವಿಧಾನ ಸಭೆಯ ಮೊದಲ ಹಂತದ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಾರಂಭಗೊಂಡಿದ್ದು. ಒಟ್ಟು ಹನ್ನೊಂದು ಜಿಲ್ಲೆಗಳಲ್ಲಿ ಹರಡಿರುವ 89 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾಗಿದೆ.

ಮೊದಲ ಹಂತದ ಚುನಾವಣೆಯು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲಿ ಮೊದಲ ಹಂತದ ಚುನಾವಣೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾಗಿವೆ.

ಮೊದಲ ಹಂತದ ಚುನಾವಣೆಯಲ್ಲಿ ರಾಜಕೀಯ ಘಟಾನುಘಟಿಗಳಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (ರಾಮನಗರ), ಮತ್ತು ಮಾಜಿ ಉಪಮುಖ್ಯಮಂತ್ರಿ, ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿರುವ ಸಿದ್ದರಾಮಯ್ಯ ಅವರು ನೂತನವಾಗಿ ಅಸ್ತಿತ್ವಕ್ಕೆ ಬಂದ ವರುಣಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ ಬಯಸಿ ಕಣಕ್ಕೆ ಇಳಿದಿದ್ದಾರೆ.

ಕ್ಷೇತ್ರ ಪುನರ್ ವಿಂಗಡನೆ ನಂತರ ಮೊದಲ ಬಾರಿಗೆ ರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯು ಕರ್ನಾಟಕದಲ್ಲಿ ನಡೆಯುತ್ತಿದ್ದು ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ಹೇಳಿದೆ.

ಶಾಂತಿಯುತ ಚುನಾವಣೆಗೆ ಭಾರಿ ಬಿಗಿಬಂದೋಬಸ್ತನ್ನು ಆಯೋಜಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಡಿಜಿ, ಐಜಿಪಿ ಶ್ರೀಕುಮಾರ್ ಅವರು ಮೊದಲ ಚುನಾವಣೆಯಲ್ಲಿ ಒಳಪಡುವ 89 ವಿಧಾನಸಭಾ ಕ್ಷೇತ್ರಗಳಲ್ಲಿ 6,252 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳು ಮತ್ತು ಮೂರುವರೆ ಸಾವಿರ ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ವರ್ಗಿಕರಿಸಿ ಕಾನೂನು ಸುವ್ಯವಸ್ಥೆಯನ್ನು ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಕೇಂದ್ರ ಅರೆಸೇನಾ ಪಡೆಗಳು ಸೇರಿದಂತೆ ಒಟ್ಟು 58 ಸಾವಿರ ರಕ್ಷಣಾ ಸಿಬ್ಬಂದಿಯನ್ನು ಮೊದಲ ಹಂತದ ಚುನಾವಣೆಯಲ್ಲಿ ನಿಯೋಜಿಸಲಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ 1.73 ಕೋಟಿ ಅರ್ಹ ಮತದಾರರು ಇದ್ದಾರೆ ಎಂದು ಪೊಲೀಸ್ ಮಹಾ ನಿರ್ದೇಶಕರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಹಳೆ ಮೈಸೂರು ವಿಭಾಗದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ 440 ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 950 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ. 2004ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 34, ಕಾಂಗ್ರೆಸ್ 24 ಮತ್ತು ಬಿಜೆಪಿ 15 ಸ್ಥಾನಗಳನ್ನು ಗೆದ್ದಿತ್ತು.
ಮತ್ತಷ್ಟು
ನಿರ್ಭೀತಿಯಿಂದ ಮತ ಚಲಾಯಿಸಿ: ಅಚ್ಯುತರಾವ್
ಅಕ್ಕಿ ಹಂಚಲು ಸಿದ್ದವಾಗಿದ್ದ ಬಿಜೆಪಿ
ಶನಿವಾರ ಮೊದಲ ಹಂತದ ಚುನಾವಣೆ
ಕಾಂಗ್ರೆಸ್‌ಗೆ 65 ಸ್ಥಾನಗಳು ಖಚಿತ: ಖರ್ಗೆ
ಶಿಕಾರಿಪುರ: ಅಪ್ಪನ ಪರ ಪ್ರಚಾರಕ್ಕೆ ಮಗ ಸಿದ್ಧ
ನೀತಿ ಸಂಹಿತೆ ಉಲ್ಲಂಘನೆ: ಸುರೇಶಗೌಡ ಬಂಧನ