ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಯೋತ್ಪಾದನೆಗೆ ಕಾಂಗ್ರೆಸ್ ಶರಣಾಗಿಲ್ಲ: ರಾಹುಲ್
ಹರಪನಹಳ್ಳಿ/ಕುಂದಾಪುರ: ಭಯೋತ್ಪಾದನೆಗೆ ಕಾಂಗ್ರೆಸ್ ತಲೆತಗ್ಗಿಸುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪರ ಎರಡನೇ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡ ಅವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ರಾಜ್ಯದ ಅಭಿವೃದ್ದಿ, ಪ್ರಗತಿ ಹಾಗೂ ಭವಿಷ್ಯದ ಕುರಿತು ಮಾತನಾಡದೇ ಬರೀ ಭಯೋತ್ಪಾದನೆ ಬಗ್ಗೆ ವಿರೋಧ ಪಕ್ಷಗಳು ಮಾತನಾಡುತ್ತಿದೆ ಎಂದು ವಿಷಾದಿಸಿದರು.

ರಾಜ್ಯದ ಎಲ್ಲಾ ಪ್ರದೇಶಗಳ ಜನರು ಪ್ರಗತಿಯ ತೆಕ್ಕೆಗೆ ಬರಬೇಕು. ಆದ್ದರಿಂದ ಸಮತೋಲನ, ಸಮಗ್ರತೆ ಮತ್ತು ನ್ಯಾಯವನ್ನು ಒದಗಿಸುವ ಒಂದು ಸರ್ಕಾರದ ಅವಶ್ಯಕತೆ ರಾಜ್ಯಕ್ಕಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ಬಹುಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಕುಂದಾಪುರ ವರದಿ:
ಕುಂದಾಪುರದಲ್ಲಿ ಅಭ್ಯರ್ಥಿ ಪರ ಪ್ರಚಾರ ಮಾಡಿದ ಅವರು, ಉಗ್ರವಾದಿಗಳ ಬಗ್ಗೆ ಮೃಧು ಧೋರಣೆ ಹೊಂದಿದೆ ಎಂದು ಕಾಂಗ್ರೆಸ್‌ ದೂರುತ್ತಿರುವ ಬಿಜೆಪಿ ಕಂದಹಾರದಲ್ಲಿ ಉಗ್ರರ ಜೊತೆ ಒಪ್ಪಂದ ಮಾಡಿಕೊಂಡಿರುವುದು ಯಾಕೆ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನತೆ ಮತ್ತೆ ಚುನಾವಣೆ ಎದುರಿಸಬೇಕಾಗುತ್ತದೆ. ಈ ಮೂಲಕ ರಾಜ್ಯದ ಅಭಿವೃದ್ದಿ ಕುಂಠಿತವಾಗುತ್ತದೆ ಎಂದ ಅವರು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸ್ಥಿರ ಸರ್ಕಾರದ ಅಗತ್ಯವಿದ್ದು, ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.
ಮತ್ತಷ್ಟು
ಫಲಿತಾಂಶ ಬರದೇ ಬೆಂಕಿಗೆ ಗೆಲುವು
ಬಿಜೆಪಿಯದು ಕನಸೇಂದ: ಸಿದ್ದು
ರಾಜ್ ಪುತ್ಥಳಿ ವಿರೂಪ ಕನ್ನಡ ಸಂಘಟನೆಗಳ ಪ್ರತಿಭಟನೆ
ನ್ಯಾಯಾಲಯದಲ್ಲಿ ಸ್ಪೋಟ:ರಾಜ್ಯಾದ್ಯಂತ ಕಟ್ಟೆಚ್ಚರ
ಮರುಮತದಾನದ ಮಾಹಿತಿ ಇಲ್ಲದ ಬೇಗ್
ಮರಳಿ ಕೈ ಹಿಡಿದ ದಿವಾಕರ ಬಾಬು