ತೀವ್ರ ಕುತೂಹಲ ಮೂಡಿಸಿರುವ ಅಕ್ರಮ ಗಣಿಗಾರಿಕೆ ಕುರಿತ ತನಿಖಾ ವರದಿಯನ್ನು ಚುನಾವಣಾ ಫಲಿತಾಂಶದ ಮುನ್ನಾದಿನ ಪ್ರಕಟಿಸಲು ಲೋಕಾಯುಕ್ತ ನಿರ್ಧರಿಸಿದೆ.
ಈ ಬಗ್ಗೆ ಮಂಗಳವಾರ ಸುದ್ದಿಗಾರರಿಗೆ ವಿವರಣೆ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ, ಸರ್ಕಾರ ನಿಯೋಜಿಸಿದ್ದ ಅಕ್ರಮ ಗಣಿಗಾರಿಕೆ ಕುರಿತಾದ ತನಿಖೆ ಪೂರ್ಣಗೊಂಡಿದ್ದು, ವರದಿಯನ್ನು 24ರಂದು ಬಹಿರಂಗಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ತನಿಖೆಯನ್ನು ಈ ಮೊದಲೇ ಪೂರ್ಣಗೊಳಿಸಿದ್ದರೂ, ರಾಜ್ಯದಲ್ಲಿ ಚುನಾವಣೆ ಎದುರಾಗಿದ್ದರಿಂದ ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರೆ ವಿವಿಧ ರಾಜಕೀಯ ಪಕ್ಷಗಳಿಗೆ ಪ್ರಚಾರದ ವಸ್ತುವಾಗುವ ಅಪಾಯ ಇದ್ದು, ಆದ್ದರಿಂದ ವರದಿಯನ್ನು ಸದ್ಯಕ್ಕೆ ಬಹಿರಂಗಗೊಳಿಸದಿರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಅಕ್ರಮ ಗಣಿಗಾರಿಕೆಯಲ್ಲಿ ಬಹುತೇಕ ವಿವಿಧ ರಾಜಕೀಯ ಮುಖಂಡರು ಭಾಗಿಯಾಗಿರುವುದು ಈಗಾಗಲೇ ತಿಳಿದ ವಿಚಾರ. ಇದರಲ್ಲಿ ಶಾಮೀಲಾಗಿರುವ ಅಧಿಕಾರಿಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಇನ್ನೂ ಕೆಲವು ಅಧಿಕಾರಿಗಳಿಗೆ ಇದೇ 24ರಂದು ನೋಟಿಸ್ ಜಾರಿ ಮಾಡಲಾಗುವುದು ಎಂದು ಅವರು ತಿಳಿಸಿದರು.
|