ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಳ್ಳಾರಿ: ಬಿಜೆಪಿ-ಕಾಂಗ್ರೆಸ್ ನಡುವೆ ಪೈಪೋಟಿ
ಎರಡನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ಕೊನೆಗೊಳ್ಳಲಿರುವುದರಿಂದ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿವೆ. ಕಾಂಗ್ರೆಸ್ ಮತ್ತು ಬಿಜೆಪಿ ಪ್ರಚಾರದುದ್ದಕ್ಕೂ ಪರಸ್ಪರ ವಾಗ್ದಾಳಿ ನಡೆಸಿದೆ.

ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಹುನ್ನಾರ ನಡೆಸುತ್ತಿದ್ದು, ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ದಿವಾಕರ್ ಬಾಬು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅಹಿತಕರ ಘಟನೆ ನಡೆಸಲು ಬಿಜೆಪಿ ಷಡ್ಯಂತರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಹೊರಗಿನಿಂದ 5ಸಾವಿರಕ್ಕೂ ಹೆಚ್ಚು ಮಂದಿಯನ್ನು ಕರೆಸಿಕೊಂಡಿದೆ ಎಂದು ಆಪಾದಿಸಿದರು.

ಅಲ್ಲದೆ, ಬಿಜೆಪಿ ಮುಖಂಡರು ಗೂಂಡಾಗಳನ್ನು ಕರೆಸಿಕೊಂಡು ತಮ್ಮ ಕಾರ್ಯಕರ್ತರಿಗೆ ಬೆದರಿಕೆಯನ್ನೊಡ್ಡುತ್ತಿದ್ದಾರೆ ಎಂದ ಅವರು, ಈ ಬಗ್ಗೆ ಚುನಾವಣಾ ಆಯೋಗ ಪರೀಶೀಲಿಸಿ ಸೂಕ್ತ ಭದ್ರತೆ ಒದಗಿಸಬೇಕೆಂದು ಆಯೋಗಕ್ಕೆ ಮನವಿ ಮಾಡಿದರು.

ಚುನಾವಣೆ ಮೊದಲೇ ಸೋಲೊಪ್ಪಿಕೊಂಡ ದಿವಾಕರ್:

ನಗರದ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್, ಚುನಾವಣೆ ನಡೆಯುವ ಮೊದಲೇ ಜೆಡಿಎಸ್ ಅಭ್ಯರ್ಥಿ ದಿವಾಕರ್ ಬಾಬು ಸೋಲನ್ನೊಪ್ಪಿಕೊಂಡಿದ್ದಾರೆ. ಬಿಜೆಪಿಗೆ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನು ಬಾಚಿಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮತ್ತಷ್ಟು
ಯಡಿಯೂರಪ್ಪ ಸೋಲುವುದು ನಿಶ್ಚಿತ: ಅಮರಸಿಂಗ್
ಕಾಂಗ್ರೆಸ್ ಆತಂಕವಾದಿಗಳಿಗೆ ಬೆಂಬಲ:ಸುಷ್ಮಾ ಆರೋಪ
ಇಂದು ಕರೀಂ ಲಾಲಾ ತೆಲಗಿ ಬೆಂಗಳೂರಿಗೆ
24ರಂದು ಅಕ್ರಮ ಗಣಿಗಾರಿಕೆ ವರದಿ ಪ್ರಕಟ
'ಸಾಲಮನ್ನಾ, ಮಹಿಳಾ ಮೀಸಲಾತಿ ಕಾಂಗ್ರೆಸ್ ಸಾಧನೆ'
ಹುಬ್ಬಳ್ಳಿ ಬಾಂಬ್ ಸ್ಫೋಟ: ಚುರುಕುಗೊಂಡ ತನಿಖೆ