ಬೆಂಗಳೂರು: ರಾಜಸ್ಥಾನದ ಜೈಪುರದಲ್ಲಿ ನಿನ್ನೆ ಸಂಭವಿಸಿದ ಸರಣಿ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ದೇವಾಲಯ, ಚರ್ಚ್, ಮಸೀದಿ, ರೈಲ್ವೆ, ಬಸ್ ಹಾಗೂ ವಿಮಾನ ನಿಲ್ದಾಣದ ಸೇರಿದಂತೆ ಎಲ್ಲ ಪ್ರಮುಖ ಸ್ಥಳಗಳ ಮೇಲೆ ತೀವ್ರ ನಿಗಾ ಇರಿಸಿರುವ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.
ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ಅನುಮಾನ್ಸಪದ ವ್ಯಕ್ತಿಗಳನ್ನು ವಿಚಾರಣೆಗೆ ಗುರಿಪಡಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಶ್ರೀಕುಮಾರ್ ಅವರು ತಿಳಿಸಿದ್ದಾರೆ.
ಈ ಮಧ್ಯೆ ರಾಜ್ಯದಲ್ಲಿ ಚುನಾವಣೆಗಳು ನಡೆಯುತ್ತಿರುವುದರಿಂದ ಎಲ್ಲಾ ಕಡೆಗಳಲ್ಲಿಯೂ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಿನ್ನೆ ರಾತ್ರಿಯಿಂದಲೇ ಪೊಲೀಸರು ಗಸ್ತು ತಿರುಗುತ್ತಿದ್ದು, ಪ್ರತಿ ವಸ್ತುಗಳ ಮೇಲೆಯೂ ಹದ್ದಿನ ಕಣ್ಣಿಟ್ಟಿದ್ದಾರೆ.
|