ಚುನಾವಣೆಗೆ ಒಂದು ದಿನ ಬಾಕಿ ಇರುವಂತೆಯೇ ಬಳ್ಳಾರಿ ಜಿಲ್ಲೆಯಲ್ಲಿ ರಾಜಕೀಯ ಘರ್ಷಣೆ ಭುಗಿಲೆದ್ದಿದೆ. ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿಯವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನದ ಸುಮಾರಿಗೆ ಈ ಬೆಳವಣಿಗೆ ಕಂಡು ಬಂದಿದ್ದು, ಬಂಧನದ ಸುದ್ದಿ ಹರಡುತ್ತಿದ್ದಂತೆ ಬಿಜೆಪಿ ಬೆಂಬಲಿಗರು ಗಾಂಧಿನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಇದೀಗ ಬಂದ ವರದಿಯಂತೆ ರೆಡ್ಡಿಯವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಕಾರ್ಯಕರ್ತ ನಾಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ದಾಖಲಿಸಿಕೊಂಡ ಬ್ರೂಸ್ ಪೇಟೆ ಪೊಲೀಸರು ಶ್ರೀರಾಮುಲು ಬಂಧನಕ್ಕಾಗಿ ಶೋಧ ನಡೆಸಿದರು. ಆದರೆ ಶ್ರೀರಾಮುಲು ಪೊಲೀಸರಿಗೆ ಸಿಗದೇ ಇದ್ದಾಗ ಇನ್ನೊಬ್ಬ ಬಿಜೆಪಿ ಅಭ್ಯರ್ಥಿ ಜನಾರ್ದನ ರೆಡ್ಡಿಯವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
|