ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಶ್ರೀರಾಮುಲು ಅವರನ್ನು ನ್ಯಾಯಾಲಯವು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಚುನಾವಣಾ ಮುನ್ನಾದಿನ ಬಳ್ಳಾರಿಯಲ್ಲಿ ಭುಗಿಲೆದ್ದ ಸಂಘರ್ಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ನಾಣಿ ಮೇಲೆ ಶ್ರೀರಾಮುಲು ಹಲ್ಲೆ ನಡೆಸಿದ್ದಾರೆ ಎಂದು ಗಾಂಧಿನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜನಾರ್ದನ ರೆಡ್ಡಿಯವರನ್ನು ವಿಚಾರಣೆಗೊಳಪಡಿಸಿದರು.
ಬಳಿಕ ಸಂಜೆ ಠಾಣೆಗೆ ಆಗಮಿಸಿದ ಶ್ರೀರಾಮುಲು ಅವರಿಗೆ ನ್ಯಾಯಾಲಯ ಶರತ್ತು ಬದ್ಧ ಜಾಮೀನು ನೀಡಿದೆ. ಕೂಡಲೇ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ ಶ್ರೀರಾಮುಲು, ಸೋಲಿನ ಭೀತಿಯಿಂದ ಕಾಂಗ್ರೆಸ್ ಈ ಪ್ರಕರಣವನ್ನು ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಸೂಕ್ತವಾಗಿ ಕಾರ್ಯ ನಿರ್ವಹಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ. ಆ ಸ್ಥಾನಕ್ಕೆ ಅಲೋಕ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಿಸಲು ಆದೇಶ ಹೊರಡಿಸಿದೆ.
|