ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ತಿಳಿಸಿದ್ದಾರೆ.
ಶಿಕಾರಿಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಂಗಾರಪ್ಪ, ಚುನಾವಣಾ ಪೂರ್ವ ಸಮೀಕ್ಷೆಗಳು ಧೂಳೀಪಟವಾಗಲಿದ್ದು, ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಮುಂದಿನ ಬಾರಿಯೂ ಸಮ್ಮಿಶ್ರ ಸರ್ಕಾರವೇ ರಾಜ್ಯಕ್ಕೆ ಗತಿ ಎಂದು ಹೇಳಿದ್ದಾರೆ.
ಚುನಾವಣೆ ಬಳಿಕ ಜಾತ್ಯತೀತ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ದವಿರುವುದಾಗಿ ತಿಳಿಸಿದ ಅವರು, ಸೊರಬದಲ್ಲಿ ಮಧು ಬಂಗಾರಪ್ಪ ಅವರ ಗೆಲುವು ಖಚಿತ ಎಂದು ಆತ್ಮವಿಶ್ವಾಸದಿಂದ ಮಾತನಾಡಿದರು.
ತಮ್ಮ ವಿರುದ್ಧ ಯಾವ ಅಭ್ಯರ್ಥಿ ನಿಂತಿದ್ದಾರೆ ಎಂಬುದು ಮುಖ್ಯವಲ್ಲ. ಕೋಮುವಾದದ ಶಕ್ತಿ ಅಡಗಿಸಲು ತಾನು ಕಣಕ್ಕಿಳಿದಿರುವುದಾಗಿ ತಿಳಿಸಿದ ಅವರು, ತಮಗೆ ಬೆಂಬಲಿಸಿ ಪಕ್ಷಗಳಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
|