ರಾಜ್ಯ ವಿಧಾನಸಭೆಗೆ ಮೊದಲ ಎರಡು ಹಂತದ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೆ ಹಂತದ ಚುನಾವಣೆ ನಡೆಯುಲಿರುವ ಉತ್ತರ ಕರ್ನಾಟಕದಲ್ಲಿ ಈಗಾಗಲೇ ಚುನಾವಣಾ ರಂಗು ಏರಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಗೆ ಆಗಮಿಸಲಿದ್ದರೆ, ಬಿದರ್‌ನಿಂದ ಭಾರತೀಯ ಜನತಾ ಪಕ್ಷ ಚುನಾವಣಾ ತಾಲೀಮು ಪ್ರಾರಂಭಿಸಲಿದೆ.
ಮೂರನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಗುಲ್ಬರ್ಗ, ಬಿಜಾಪುರ, ಬೀದರ್, ಗದಗ, ಧಾರಾವಾಡ ಹಾವೇರಿ ಜಿಲ್ಲೆಗಳು ಒಳಗೊಂಡಿದ್ದು, ಇದೇ 22ರಂದು ಮತದಾನ ನಡೆಯಲಿದೆ. ಕೊನೆಯ ಹಂತದ ಮತದಾನದಲ್ಲಿ ಹೆಚ್ಚಿನ ಸ್ಥಾನ ಪಡೆಯುವುದಕ್ಕಾಗಿ ರಾಜಕೀಯ ಕಸರತ್ತು ಮುಂದುವರೆದಿದೆ.
ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಶನಿವಾರ ಆಗಮಿಸಲಿದ್ದು, ಇಲ್ಲಿನ ನೆಹರೂ ಮೈದಾನದಲ್ಲಿ ಏರ್ಪಡಿಸಲಾಗಿರುವ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕಾಂಗ್ರೆಸ್, ಮೂರನೇ ಹಂತದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದೆ.
ಇತ್ತ ಬಿಜೆಪಿ ಕೂಡ ಕೊನೆಯ ಹಂತದ ಚುನಾವಣೆಗೆ ರಣಕಹಳೆ ಮೊಳಗಿಸಿದೆ. ರಾಜ್ಯಕ್ಕೆ ಈಗಾಗಲೇ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಪ್ರಧಾನ ಕಾರ್ಯದರ್ಶಿ ಅರುಣ್ ಜೈಟ್ಲಿಯವರು ಬೀದರ್‌ನಲ್ಲಿ ಆಯೋಜಿಸಿರುವ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.
|