ಮುಖ್ಯಮಂತ್ರಿ ಅಭ್ಯರ್ಥಿಯೆಂದು ಬಿಂಬಿಸಲಾಗಿರುವ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರದಲ್ಲಿ ಗೆದ್ದರೂ, ಸೋತರೂ ಅವರೇ ಮುಖ್ಯಮಂತ್ರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಶಿಕಾರಿಪುರ ಕ್ಷೇತ್ರದಲ್ಲಿ ಯಡಿಯೂರಪ್ಪ ಸೋಲುವ ಸಾಧ್ಯತೆಗಳೇ ಇಲ್ಲ. ಒಂದು ವೇಳೆ ಸೋತರೂ ಅವರನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಸ್ಪಷ್ಟ ದಿಶೆ ಹಾಗೂ ನಿರ್ದಿಷ್ಟ ಕಾರ್ಯಕ್ರಮಗಳನ್ನು ಹೊಂದಿರದ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದರೆ ಏನು ಅಭಿವೃದ್ದಿ ಮಾಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
ರಾಜ್ಯದ ಉದ್ದಗಲಕ್ಕೂ ಸಂಚರಿಸಿರುವುದಾಗಿ ತಿಳಿಸಿದ ಅವರು, ಎಲ್ಲಡೆಯೂ ಬಿಜೆಪಿ ಪರ ಅಲೆಯಿದೆ. ಎರಡು ಹಂತದ ಮತದಾನದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ತಿಳಿಸಿದರು.
|