ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಡಿಯೂರಪ್ಪ ಕನಸು ನನಸಾಗಲ್ಲ:ಪೂಜಾರಿ  Search similar articles
ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಯಡಿಯೂರಪ್ಪ ಅವರ ಕನಸು ಎಂದಿಗೂ ನನಸಾಗಲ್ಲ ಎಂದು ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ವ್ಯಂಗ್ಯವಾಡಿದ್ದಾರೆ.

ಶಿಕಾರಿಪುರದಲ್ಲಿ ಯಡಿಯೂರಪ್ಪನವರು ಸುಮಾರು 5ಸಾವಿರ ಮತಗಳಿಂದ ಸೋಲನ್ನು ಅನುಭವಿಸಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಯಾಗುವ ಕನಸು ಭಗ್ನಗೊಳ್ಳಲಿದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯಿಂದ ನಕಲಿ ಮತದಾನವಾಗಿದೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಯೊಗವನ್ನು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ. ಶಿಕಾರಿಪುರದಲ್ಲಿ ಕಣಕ್ಕಿಳಿದಿರುವ ಸಮಾಜವಾದಿ ಪಕ್ಷದ ಮುಖಂಡ ಬಂಗಾರಪ್ಪ ಅವರ ಬೆಂಬಲ ಕಾಂಗ್ರೆಸ್‌ಗೆ ಅಗತ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲಿಯೇ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಮತ್ತಷ್ಟು
'ಸೋತರೂ, ಗೆದ್ದರೂ ಯಡಿಯೂರಪ್ಪ ಮುಖ್ಯಮಂತ್ರಿ'
ಸೋನಿಯಾ,ರಾಜನಾಥ್ ರಾಜಕೀಯ ಕಸರತ್ತು
ರಾಜ್ಯದಲ್ಲಿ ಅತಂತ್ರ ವಿಧಾನ ಸಭೆ: ಬಂಗಾರಪ್ಪ
ನಕ್ಸಲ್ ರಾಜಕೀಯ: ಹೆಬ್ರಿ ಬಳಿ ಇಬ್ಬರು ನಾಗರಿಕರ ಹತ್ಯೆ
ಕಾಂಗ್ರೆಸ್ ಪರ ಅಧಿಕಾರಿ ಮತಯಾಚನೆ
ಶ್ರೀರಾಮುಲುಗೆ ಜಾಮೀನು, ಬಳ್ಳಾರಿ ಎಸ್ಪಿ ಅಮಾನತು