ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕೈಗೊಂಡಿರುವ ಕೃಷಿ ಸಾಲಮನ್ನಾ ಯೋಜನೆಯಿಂದ ರೈತರಿಗೆ ನವಜೀವನವನ್ನು ನೀಡಿದಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿಪ್ರಾಯ ಪಟ್ಟಿದ್ದಾರೆ.
ನೆಹರು ಮೈದಾನದಲ್ಲಿ ಏರ್ಪಡಿಸಲಾಗಿರುವ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಅಭಿವೃದ್ದಿಗಾಗಿ ಕಾಂಗ್ರೆಸ್ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ ವಿರೋಧ ಪಕ್ಷಗಳಿಗೆ ಸ್ವಾರ್ಥ ಸಾಧನೆಯೇ ಪ್ರಮುಖ ಆದ್ಯತೆಯಾಗಿದೆ ಎಂದು ವಿರೋಧ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಹಿಡಿಯಲಾಗುವುದು ಎಂದು ಅವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್. ಎಂ. ಕೃಷ್ಣ, ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಲೂ ಬಿಜೆಪಿಯೇ ಕಾರಣ ಎಂದು ನೇರವಾಗಿ ಆರೋಪಿಸಿದರು. ಕಾಂಗ್ರೆಸ್‌ನಿಂದ ಮಾತ್ರ ಸ್ಥಿರ ಸರ್ಕಾರ ಸಾಧ್ಯ ಎಂದ ಅವರು, ಸಾಮಾಜಿಕ ಸದ್ಬಾವನೆಗೆ ಕಾಂಗ್ರೆಸ್ ಸದಾ ಸಿದ್ದ ಎಂದು ತಿಳಿಸಿದರು.
|