ಮೂರನೇ ಹಂತದ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿದ್ದು ಮಂಗಳವಾರ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.
ಈ ಮಧ್ಯೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಚುನಾವಣಾ ಆಯೋಗವು ದಕ್ಷ ಅಧಿಕಾರಿ ರೇಮಂಡ್ ಪೀಟರ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಕಗೊಳಿಸಿದೆ.
ಬಳ್ಳಾರಿ ಜಿಲ್ಲೆ ಮತ್ತು ಕಲಘಟಗಿ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ವಿಶೇಷ ಅಧಿಕಾರಿಯಾಗಿ ನೇಮಕವಾಗಿದ್ದ ರೇಮಂಡ್ ಪೀಟರ್ ಅವರನ್ನು ಧಾರವಾಡ ಮತ್ತು ಗದಗ ಜಿಲ್ಲೆಗೆ ವಿಸ್ತರಿಸಿ ನೇಮಕಗೊಳಿಸಿರುವುದು ಅಚ್ಚರಿ ತಂದಿದೆ. ಮುಖ್ಯವಾಗಿ ಕಲಘಟಗಿ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳಿಗೆ ತಡೆಹಿಡಿಯುವ ನಿಟ್ಟಿನಲ್ಲಿ ಪೀಟರ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
|