ಇತ್ತೀಚೆಗಷ್ಟೆ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್ ರಾವಣ, ಬಿಜೆಪಿ ರಾಮ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗವು ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಅದರ ಬೆನ್ನಲ್ಲೆ ಯಡಿಯೂರಪ್ಪ ವಿರುದ್ಧ ಈಗ ಮತ್ತೊಂದು ದೂರು ದಾಖಲಾಗಿದೆ.
ಯಡಿಯೂರಪ್ಪನವರು ಚುನಾವಣಾ ನೀತಿ ಉಲ್ಲಂಘನೆ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ವಿಧಾನ ಪರಿಷತ್ತಿನ ಸದಸ್ಯ ವಿ.ಎಸ್. ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.
ಕೊನೆಯ ಹಂತದ ಚುನಾವಣಾ ಪ್ರಚಾರ ಮಾಡುವಾಗ ಯಡಿಯೂರಪ್ಪ ಅವರು ತಮ್ಮ ಅಕ್ಕ ಪಕ್ಕದಲ್ಲಿ ದಲಿತ ಹಾಗೂ ಮುಸ್ಲಿಂ ವ್ಯಕ್ತಿಯನ್ನು ನಿಲ್ಲಿಸಿಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ನೀಡಿರುವ ಹೇಳಿಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ ಎಂದು ದೂರಿನಲ್ಲಿ ನಿಯೋಗವು ತಿಳಿಸಿದೆ.
|