ರಾಜ್ಯದ ನಡೆದಿರುವ ಕಳ್ಳಭಟ್ಟಿ ದುರಂತದ ನೈತಿಕ ಹೊಣೆ ಹೊತ್ತು ರಾಜ್ಯಪಾಲರು ಹಾಗೂ ಅವರ ಸಲಹೆಗಾರರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ರಾಜ್ಯಪಾಲ ಆಡಳಿತ ಸಂಪೂರ್ಣ ವಿಫಲವಾಗಿದ್ದು, ರಾಜೀನಾಮೆ ನೀಡಿದರೆ ರಾಜ್ಯಪಾಲರ ಆಳ್ವಿಕೆ ಆದರ್ಶವಾಗಬಹುದು ಎಂದು ಅವರು ತಿಳಿಸಿದ್ದಾರೆ.
ಕಳ್ಳಭಟ್ಟಿ ದುರಂತದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಯಬೇಕು. ಆ ಮೂಲಕ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಆಯೋಗದ ಕಟ್ಟುನಿಟ್ಟಿನ ಕ್ರಮದ ಕುರಿತು ಮಾತನಾಡಿದ ಅವರು, ಚುನಾವಣಾ ಆಯೋಗದ ಕಟ್ಟುನಿಟ್ಟಿನ ವ್ಯವಸ್ಥೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ. ಅದೇ ರೀತಿಯಲ್ಲಿ ಕಡ್ಡಾಯ ಮತದಾನ ವ್ಯವಸ್ಥೆಗೆ ಚುನಾವಣಾ ಆಯೋಗ ಮುಂದಾಗಬೇಕಾಗಿದೆ ಎಂದು ತಿಳಿಸಿದರು.
|