ಅಕ್ರಮ ಗಣಿಗಾರಿಕೆ ಕುರಿತು ತನಿಖಾವರದಿಯನ್ನು ಸಿದ್ದಪಡಿಸುತ್ತಿರುವ ರಾಜ್ಯ ಲೋಕಾಯುಕ್ತರು ಬಳ್ಳಾರಿಯ ಆಸುಪಾಸಿನಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕೆನರಾ ಮಿನರಲ್ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಲಾಡ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾಗಿರುವ ರಾಜಕಾರಣಿಗಳಿಗೆ ಚುನಾವಣೆ ಮುಗಿದ ಕೂಡಲೇ ನೋಟಿಸ್ ಜಾರಿ ಮಾಡಲಾಗುವುದು ಎಂದು ಲೋಕಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.
ಅರಣ್ಯಪ್ರದೇಶಗಳಲ್ಲಿಯೂ ಗಣಿಗಾರಿಕೆ ಮುಂದುವರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ತುಮಕೂರಿನ ಶಿವಸಂದ್ರದಲ್ಲಿ ಅಕ್ರಮ ಗಣಿಗಾರಿಕೆ ಆಗಿರುವ ಬಗ್ಗೆ ಮಾಹಿತಿ ದೊರೆತಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ. ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಗಣಿಗಾರಿಕೆ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಅವರು ಪರೀಶೀಲನೆ ನಡೆಸಲಿದ್ದಾರೆ. 23ರಂದು ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಆ ಬಳಿಕ 24ರಂದು ಗಣಿಗಾರಿಕೆ ಕುರಿತು ಅಂತಿಮ ವರದಿಯನ್ನು ಲೋಕಾಯುಕ್ತರು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಮಧ್ಯೆ ಕೆನರಾ ಮಿನರಲ್‌ದ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ಮಾಹಿತಿ ದೊರೆತಿದ್ದು, ಇದು ಬಳ್ಳಾರಿಯ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಲಾಡ್ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.
|