ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಲ್ಲ ಬಡವರ ಸಾಲಮನ್ನಾ:ದೇವೇಗೌಡ  Search similar articles
ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತ, ಕುಶಲಕರ್ಮಿಗಳು ಸೇರಿದಂತೆ ಎಲ್ಲ ಬಡವರ್ಗದವರ ಸಾಲಮನ್ನಾ ಮಾಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ಬಡವರ್ಗದವರಿಗೆ ಬಿಪಿಎಲ್ ಕಾರ್ಡ್ ಮತ್ತು ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ 850 ಕೋಟಿ ವಿಮೆ ಇಳಿಸುವ ಮೂಲಕ ರಾಜ್ಯದ 2.5 ಕೋಟಿ ಜನರ ಆರೋಗ್ಯದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದು ಘೋಷಿಸಿದ್ದಾರೆ.

ದೇಶದಲ್ಲಿಯೇ ಪ್ರಥಮ ಬಾರಿಗೆ ಕುಮಾರಸ್ವಾಮಿಯವರು ನಡೆಸಿದ ಗ್ರಾಮ ವಾಸ್ತವ್ಯ ಇತರ ಎಲ್ಲ ರಾಜಕೀಯ ಪಕ್ಷಗಳಿಗೆ ಮಾದರಿಯಾಗಿದೆ ಎಂದು ತಿಳಿಸಿದ ಅವರು, ತಮ್ಮ ಪಕ್ಷವನ್ನು ಹತ್ತಿಕ್ಕಲು ಜೆಡಿಎಸ್ ತೊರೆದ ನಾಯಕರು ಹುನ್ನಾರ ನಡೆಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ತಮ್ಮೊಂದಿಗೆ ಇರುವವರೆಗೂ ಯಾವ ಶಕ್ತಿಯೂ ತಮ್ಮನ್ನು ಮತ್ತು ಪಕ್ಷವನ್ನು ನಿರ್ನಾಮ ಮಾಡಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ.

ರಾಜ್ಯದ ಜನತೆಯನ್ನು ಸಾಲ ಮುಕ್ತರನ್ನಾಗಿಸುವ ತಮ್ಮ ಕನಸು ನನಸಾಗಲು ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಅವರು ಮನವಿ ಮಾಡಿದರು.
ಮತ್ತಷ್ಟು
ಕಳ್ಳಭಟ್ಟಿ ಮಾರಣ ಹೋಮಕ್ಕೆ 150 ಬಲಿ?
ಆತಂಕವಾದ ಹುಟ್ಟಿದ್ದೆ ಬಿಜೆಪಿಯಿಂದ: ಮೋಯಿಲಿ
ಅಕ್ರಮ ಗಣಿಗಾರಿಕೆಯಲ್ಲಿ ಅನಿಲ್ ಲಾಡ್?
ರಾಜ್ಯಪಾಲರ ರಾಜೀನಾಮೆಗೆ ವಾಟಾಳ್ ಆಗ್ರಹ
ನೂತನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು: ಕರವೇ
ಗೌಡರನ್ನು ಪ್ರಧಾನಿ ಮಾಡಿದ್ದು ನಾನೇ: ಲಾಲೂ