ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ ಎರಡು ಲಕ್ಷರೂ. ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಕಳ್ಳಭಟ್ಟಿ ದುರಂತದಲ್ಲಿ ಮೃತರಾದವರಿಗೆ ಸರ್ಕಾರ ಘೋಷಿಸಿರುವ ತಲಾ 50 ಸಾವಿರ ರೂ. ಪರಿಹಾರ ಸಾಕಾಗುವುದಿಲ್ಲ. ಹೀಗಾಗಿ ಎರಡು ಲಕ್ಷ ರೂ. ನೀಡುವಂತೆ ಆಯೋಗ ಶಿಫಾರಸು ಮಾಡಿದೆ.
ಪೊಲೀಸ್ ಹಾಗೂ ಅಬಕಾರಿ ಇಲಾಖೆಯ ವೈಫಲ್ಯವೇ ಕಳ್ಳಭಟ್ಟಿ ದುರಂತಕ್ಕೆ ಪ್ರಮುಖ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸರಿಯಾದ ರೀತಿಯಲ್ಲಿ ಕಾನೂನು ಪಾಲಿಸಿ ನಿಯಂತ್ರಿಸದಿದ್ದರೆ ಇಂತಹ ಪರಿಸ್ಥಿತಿ ಎದುರಾಗುವುದಿಲ್ಲ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್.ಆರ್. ನಾಯಕ್ ಇದೇ ಸಂದರ್ಭದಲ್ಲಿ ತಿಳಿಸಿದರು.
ಮೂವರ ಬಂಧನ ಈ ಮಧ್ಯೆ ಬೈಲನರಸಾಪುರದಲ್ಲಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಳ್ಳಭಟ್ಟಿ ದುರಂತಕ್ಕೆ ಕಾರಣರಾದ ಮೂರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸೈಯದ್ ಖಾದಿರ್, ಸೈಯದ್ ಅಜ್ಗರ್ ಹಾಗೂ ಇಮ್ತಿಯಾಜ್ ಅಹ್ಮದ್ ಬಂಧಿತ ಆರೋಪಿಗಳಾಗಿದ್ದಾರೆ.
|