ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನೆರಡೇ ದಿನ ಬಾಕಿ ಉಳಿದಿದೆ. ಈ ನಿಟ್ಟಿನಲ್ಲಿ ದೇಶದ ಚಿತ್ತ ಈಗ ರಾಜ್ಯ ವಿಧಾನಸಭಾದತ್ತ ಹೊರಳಿದೆ.
ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್, ರಾಜ್ಯದ ಮೂರು ಹಂತದ ಚುನಾವಣೆಯಲ್ಲಿ ಒಟ್ಟು 64.72ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.
ಭಾನುವಾರ ನಡೆಯುವ ಮತ ಎಣಿಕೆ ಕಾರ್ಯಗಳಿಗೆ ಹೆಚ್ಚಿನ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಭಾನುವಾರ ಮಧ್ಯಾಹ್ನ 3 ಗಂಟೆಯೊಳಗೆ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.
ಮತ ಎಣಿಕೆಗಾಗಿ ಒಟ್ಟು 48 ಮತ ಎಣಿಕೆ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 14 ಟೇಬಲ್‌ಗಳನ್ನು ಬಳಸಲಾಗುತ್ತದೆ. ಅಲ್ಲದೆ, ಮತ ಎಣಿಕೆಗಳ ಟೇಬಲ್‌ಗೆ ಯಾವ ಅಧಿಕಾರಿ ನಿಯೋಜನೆ ಮಾಡಲಾಗುತ್ತದೆ ಎಂಬ ವಿವರ ಅಂದು ಬೆಳಿಗ್ಗೆ ತನಕ ಬಹಿರಂಗ ಪಡಿಸದಿರಲು ಆಯೋಗ ನಿರ್ಧರಿಸಿದೆ ಎಂದು ಅವರು ತಿಳಿಸಿದರು.
|