ಕರವೇ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 50 ಮಂದಿ ಕಾರ್ಯಕರ್ತರ ಬಂಧಿಸಲಾಗಿತ್ತು.
ಬಂಧನಕ್ಕೆ ಒಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕಾರ್ಯಕರ್ತರು ತುಮಕೂರು ರಸ್ತೆ ಬಳಿಯ ನೈಸ್ ರಸ್ತೆ, ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯ ವೈಟ್ ಫೀಲ್ಡ್ ಬಳಿ ಬಿಎಂಟಿಸಿ ಬಸ್‌ಗೆ ಕಲ್ಲು ತೂರಾಟ ನಡೆಸಿ ಶುಕ್ರವಾರ ರಾತ್ರಿ ಬೆಂಕಿ ಹಚ್ಚಿದ್ದಾರೆ.
ಉದ್ರಿಕ್ತ ಕಾರ್ಯಕರ್ತರು ನೈಸ್ ರಸ್ತೆಯ ಬಳಿಯ ವಸತಿ ಬಸ್‌ಗಳಿಗೆ ಬೆಂಕಿ ಹಚ್ಚಿದ್ದು, ನಂತರ ನೆಲಮಂಗಲ ಬಳಿ ಬಿಎಂಟಿಸಿ ಬಸ್‌ನಿಂದ ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ಹಚ್ಚಿದ್ದಾರೆ. ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಹಾಗೂ ಕರವೇ ಕಾರ್ಯಕರ್ತರನ್ನು ಪೊಲೀಸರು ರಾತ್ರಿ 11 ಗಂಟೆ ಸುಮಾರಿಗೆ ಬಿಡುಗಡೆ ಮಾಡಿದ್ದಾರೆ.
|