ಶುಕ್ರವಾರ ಮಧ್ಯ ರಾತ್ರಿಯಿಂದ ಕಾರ್ಯಾರಂಭ ಮಾಡಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಉದ್ಘಾಟನೆಯು ಚುನಾಯಿತ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪ್ರಧಾನಿ ಮನ್ ಮೋಹನ್ ಸಿಂಗ್ ಅವರಿಂದ ನೇರವೇರಲಿದೆ ಎಂದು ಮೂಲಭೂತ ಸೌಕರ್ಯ ಅಭಿವೃದ್ದಿ ಕಾರ್ಯದರ್ಶಿ ವಿ.ಪಿ. ಬಳಿಗಾರ್ ಮಾಹಿತಿ ನೀಡಿದ್ದಾರೆ.
ನೂತನ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ವಿಮಾನ ನಿಲ್ದಾಣ ಕಾರ್ಯಾರಂಭವಷ್ಟೇ ಮಾಡಿದೆ. ಆದರೆ ವಿಧ್ಯುಕ್ತವಾಗಿ ಉದ್ಘಾಟನೆಯನ್ನು ಹೊಸ ಸರ್ಕಾರ ರಚನೆಯಾದ ಬಳಿಕ ಪ್ರಧಾನಿವರಿಂದ ನೇರವೇರಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ನೂರಾರು ವಿಘ್ನಗಳನ್ನು ಎದುರಿಸಿ ಕೊನೆಗೂ ಶುಕ್ರವಾರ ಮಧ್ಯ ರಾತ್ರಿಯ ನಂತರ ಕಾರ್ಯಾರಂಭ ಮಾಡಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇನ್ನೂ ವಿಘ್ನಗಳ ಸರಮಾಲೆ ಅಂತ್ಯಗೊಂಡಂತೆ ಕಾಣುತ್ತಿಲ್ಲ.
|