ವಿದ್ಯಾರ್ಥಿಗಳು ಬಹು ನೀರೀಕ್ಷೆಯಿಂದ ಎದುರು ನೋಡುತ್ತಿದ್ದ ತಮ್ಮ ಭವಿಷ್ಯ ನಿರ್ಣಯಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯ ಪರೀಕ್ಷೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
ಈ ಬಾರಿಯ ಫಲಿತಾಂಶದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದು, ಜಿಲ್ಲಾವಾರು ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ವಿದ್ಯಾರ್ಥಿಗಳು ಮುಂದಿದ್ದಾರೆ. ಇದೊಂದು ಐತಿಹಾಸಿಕ ಫಲಿತಾಂಶವಾಗಿದ್ದು, ಈ ಹಿಂದೆ ನಗರ ಪ್ರದೇಶದ ವಿದ್ಯಾರ್ಥಿಗಳು ಸಿಇಟಿ ಫಲಿತಾಂಶದಲ್ಲಿ ಮುನ್ನಡೆ ಸಾಧಿಸಿದರೆ ಈ ಬಾರಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮೆರೆದಿದ್ದಾರೆ.
ಸಿಇಟಿ ಫಲಿತಾಂಶದಲ್ಲಿ ಎಂಜಿನಿಯರಿಂಗ್‍ನಲ್ಲಿ ಬೆಂಗಳೂರಿಗೆ ಕೇವಲ ಒಂದು ರಾಂಕ್ ಲಭಿಸಿದೆ. ಮೆಡಿಕಲ್‌ನಲ್ಲಿ ಮೊದಲ ರಾಂಕ್‍ನ್ನು ಬಿಜಾಪುರ ಕಾಲೇಜಿನ ವಿದ್ಯಾರ್ಥಿ ಚಾಚಿಕೊಂಡಿದ್ದಾರೆ. ವಿಶೇಷವೆಂದರೆ ಯಾರೂ ಹೆಸರೇ ಕೇಳಿರದ ಬಳ್ಳಾರಿಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸಿಇಟಿಯಲ್ಲಿ ರಾಂಕ್ ಪಡೆಯುವ ಮೂಲಕ ತನ್ನ ಸಾಮರ್ಥ್ಯ ಮೆರೆದಿದ್ದಾನೆ.
|