ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಾರಂಭಗೊಂಡಿದೆ. ಮೊದಲ ಸುತ್ತಿನಲ್ಲಿ ಬಿಜೆಪಿ 40 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 26 ಸ್ಥಾನಗಳಲ್ಲಿ ಮುನ್ನಡೆ ಕಂಡು ಬಂದಿದೆ. ಜೆಡಿಎಸ್ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುನ್ನಡೆ ಸಾಧಿಸಿದ್ದಾರೆ. ಯಡಿಯೂರಪ್ಪ ಸುಮಾರು 1000ಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಗುಲ್ಬರ್ಗಾದ ಚಿತ್ತಾಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿನ್ನೆಡೆ ಅನುಭವಿಸಿದ್ದಾರೆ. ಬೀದರ್ ಹುಮ್ನಾಬಾದ್ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಾಟೀಲ್ ಮುನ್ನಡೆ, ವರುಣದಲ್ಲಿ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ 1800ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಅಂತೆಯೇ, ಹರಪನಹಳ್ಳಿಯಲ್ಲಿ ಬಿಜೆಪಿಯ ಕರುಣಾಕರ ರೆಡ್ಡಿ ಹಿನ್ನಡೆ ಅನುಭವಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಎಂ.ಪಿ. ಪ್ರಕಾಶ್ ಮುನ್ನಡೆ ಸಾಧಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆ ಸಾಧಿಸಿದ್ದಾರೆ.
ಮತಯಂತ್ರ ದೋಷದಿಂದ ವಿಳಂಬ: ಕೆಲವೆಡೆ ತಾಂತ್ರಿಕ ಕಾರಣದಿಂದ ಮತಯಂತ್ರ ದೋಷದಿಂದ ಎಣಿಕೆ ಕಾರ್ಯದಲ್ಲಿ ವಿಳಂಬವಾಗಿದೆ, ಬೆಂಗಳೂರಿನ ಗೋವಿಂದರಾಜು ನಗರದಲ್ಲಿ ಮತ ಎಣಿಕೆ ಪ್ರಾರಂಭ ವಿಳ
|