ಲೋಕಸಭೆಯಿಂದ ವಿಧಾನಸಭಾ ಚುನಾವಣೆಗೆ ಇಳಿದಿರುವ ನಟ ಅಂಬರೀಷ್ ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಅವರು ಸುಮಾರು ಒಂದೂವರೆ ಸಾವಿರ ಮತಗಳಿಂದ ಹಿನ್ನೆಡೆ ಅನುಭವಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸುಮಾರು 6ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಹರಪನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಯವರು ಕಾಂಗ್ರೆಸ್ ಅಭ್ಯರ್ಥಿ ಎಂ.ಪಿ. ಪ್ರಕಾಶ್ರಿಂದ ಮುನ್ನಡೆ ಸಾಧಿಸಿದ್ದಾರೆ.
ಹುಮ್ನಾಬಾದಿನಲ್ಲಿ ಮೆರಾಜುದ್ದೀನ್ ಪಾಟೀಲ್ ಸುಮಾರು 1000 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಲಾಡ್ ಹಿನ್ನಡೆ ಅನುಭವಿಸಿದ್ದಾರೆ. ಜೇವರ್ಗಿಯಲ್ಲಿ ಧರಂಸಿಂಗ್ ಮುನ್ನಡೆ ಸಾಧಿಸಿದ್ದಾರೆ. ಚಿತ್ತಾಪುರದಲ್ಲಿ ಎರಡನೇ ಸುತ್ತಿನಲ್ಲಿ ಖರ್ಗೆ 700 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಮುನ್ನಡೆ ಹೊಂದಿರುವ ಪಕ್ಷಗಳ ಇದುವರೆಗಿನ ಫಲಿತಾಂಶ
ಬಿಜೆಪಿ-57 ಕಾಂಗ್ರೆಸ್-43 ಜೆಡಿಎಸ್-15 ಪಕ್ಷೇತರ-3
|