ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೊದಲ ಗೆಲುವು ಬಿಜೆಪಿಗೆ ದೊರೆತಿದೆ. ಕುಂದಾಪುರ ವಿಧಾನಸಬಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ಗೆಲುವನ್ನು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಮುಖಭಂಗವಾಗಿದೆ.
ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಯಡಿಯೂರಪ್ಪ ಅವರು ಪ್ರತಿಸ್ಪರ್ಧಿ ಬಂಗಾರಪ್ಪ ಅವರಿಂದ 9 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಈ ಮಧ್ಯೆ ಶಿಕಾರಿಪುರದಲ್ಲಿ ಮತಯಂತ್ರದ ದೋಷದಿಂದ ಮತ ಎಣಿಕೆ ಕಾರ್ಯ ಸ್ಥಗಿತಗೊಂಡಿದ್ದು, ಸಮಾಜವಾದಿ ಪಕ್ಷದ ಏಜೆಂಟರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಗೊಂದಲದ ವಾತಾವರಣ ಕಂಡು ಬಂದಿದ್ದು, ಎಂಟು ಮಂದಿ ಏಜೆಂಟರನ್ನು ಪೊಲೀಸರು ಬಂಧಿಸಿದ್ದಾರೆ.
ಗದಗದಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಎಚ್.ಕೆ. ಪಾಟೀಲ್ ಹಿನ್ನೆಡೆ ಅನುಭವಿಸಿದ್ದಾರೆ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಸುಮಾರು 11 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಬಳ್ಳಾರಿಯ ಸಿರಗುಪ್ಪದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಎಸ್. ಸೋಮಲಿಂಗಪ್ಪನವರು 4791 ಮತಗಳಿಂದ ಜಯ ಸಾಧಿಸಿದ್ದಾರೆ. ಬಳ್ಳಾರಿಯಲ್ಲಿ 8 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಬಿಜೆಪಿ-81 ಕಾಂಗ್ರೆಸ್-68 ಜೆಡಿಎಸ್-22 ಇತರ-8
|