110 ಸ್ಥಾನಗಳನ್ನು ಗಳಿಸುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ, ಯಡಿಯೂರಪ್ಪ ಅವರನ್ನು ತಮ್ಮ ನಾಯಕನನ್ನಾಗಿ ಆರಿಸುವ ನಿಟ್ಟಿನಲ್ಲಿ ಸೋಮವಾರ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಈ ಸಭೆಯ ಬಳಿಕ ನಾಳೆ ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಕ್ಕು ಮಂಡಿಸಲಿದೆ ಎಂದು ಬಿಜೆಪಿ ತಿಳಿಸಿದೆ.
ನಾಳೆ ನಡೆಯಲಿರುವ ಶಾಸಕಾಂಗ ಸಭೆಗೆ ಬಿಜೆಪಿ ಹಿರಿಯ ನಾಯಕ ಹಾಗೂ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಅರುಣ್ ಜೇಟ್ಲಿ ಹಾಗೂ ಹಿರಿಯ ನಾಯಕ ವೆಂಕಯ್ಯ ನಾಯ್ಡು ಭಾಗವಹಿಸಲಿದ್ದಾರೆ.
ನಿರ್ಧಾರಕ್ಕೆ ತಲೆಬಾಗುವೆ: ಕುಮಾರಸ್ವಾಮಿ ಜನರ ನಿರ್ಧಾರಕ್ಕೆ ತಲೆಬಾಗುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಅನುಭವಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸೋಲಿನ ಹೊಣೆಯನ್ನು ತಾನೇ ವಹಿಸಿಕೊಳ್ಳುತ್ತೇನೆ. ಜನಾದೇಶಕ್ಕೆ ತಲೆಬಾಗುವುದಾಗಿ ತಿಳಿಸಿದರು.
ಈ ಬಗ್ಗೆ ಯಾರನ್ನು ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆ ಹೊರಲು ಸಿದ್ದವಾಗಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
|