ಐವರು ಪಕ್ಷೇತರ ಶಾಸಕರು ಬಿಜೆಪಿ ವರಿಷ್ಠರೊಂದಿಗೆ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿಯಾಗಿ ಬಿಜೆಪಿಗೆ ತಮ್ಮ ಬೆಂಬಲ ವ್ಯಕ್ತಪಡಿಸುವ ಮೂಲಕ ಬಿಜೆಪಿಗೆ ರಾಜ್ಯದಲ್ಲಿ ಸರಕಾರ ರಚನೆಯ ಹಾದಿ ಸುಗಮವಾಗಿದೆ.
ಈ ಸಂಬಂಧ ಮಂಗಳವಾರ ರಾಜ್ಯಪಾಲರು ಕೇಂದ್ರಕ್ಕೆ ವರದಿ ಸಲ್ಲಿಸಲಿದ್ದಾರೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವದರಿಂದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಸೇರಿ ರಾಷ್ಟ್ರಪತಿಗಳ ಆಡಳಿತವನ್ನು ಸಮಾಪ್ತಿಗೊಳಿಸಬೇಕಾಗಿದೆ.
ತೆರೆಮರೆಯಲ್ಲಿ ನಡೆದ ಕಸರತ್ತಿನಲ್ಲಿ ಕೊನೆಗೂ ಬಿಜೆಪಿಗೆ ಸರಕಾರ ರಚನೆಗೆ ಸಾಧ್ಯವಾಗಿದೆ. ಮೂವರು ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ಹಾಗೂ ಉಳಿದಿಬ್ಬರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ನೀಡುವ ಸಾಧ್ಯತೆಗಳು ಹೆಚ್ಚಳವಾಗಿದೆ.
|