ಶಾಸಕಾಂಗ ಪಕ್ಷದ ನಾಯಕರಾಗಿ ಹೊರಹೊಮ್ಮಿರುವ ಬಿಜೆಪಿಯ ಮುಖಂಡ ಶುಭ ಶುಕ್ರವಾರದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡುವ ನಿರೀಕ್ಷೆ ಇದ್ದು. ಶುಕ್ರವಾರ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ನಾಳೆಯೆ ಕೆಲವು ಶಾಸಕರೊಂದಿಗೆ ಯಡಿಯೂರಪ್ಪ ನಾಳೆ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ ಇಂದು ರಾಜ್ಯಪಾಲರು ಈ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಸರಕಾರ ಅಸ್ತಿತ್ವಕ್ಕೆ ಬರಬಹುದು. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರೊಂದಿಗೆ ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
|