ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕ ವರ್ತೂರು ಪ್ರಕಾಶ್ ಅವರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರಕಾರಕ್ಕೆ ಬೆಂಬಲ ಸೂಚಿಸುವ ಮೂಲಕ ಯಡಿಯೂರಪ್ಪ ನೇತೃತ್ವದ ಸರಕಾರ ಇದ್ದ ಎಲ್ಲ ಆರು ಪಕ್ಷೇತರ ಶಾಸಕರ ಬೆಂಬಲವನ್ನು ಗಳಿಸಿಕೊಂಡಂತಾಗಿದೆ.
ಈ ಸಂಬಂಧ ಇಂದು ಖಾಸಗಿ ಹೊಟೇಲ್‌ನಲ್ಲಿ ಜರುಗಿದ ಬಿಜೆಪಿ ಸಭೆಗೆ ವರ್ತೂರು ಪ್ರಕಾಶ್ ಆಗಮಿಸಿ ತಮ್ಮ ಬೆಂಬಲವನ್ನು ಸೂಚಿಸಿದರು.
ಇಂದು ನಡೆದ ಬಿಜೆಪಿ ಸಭೆಯಲ್ಲಿ ಸರ್ಕಾರ ರಚನೆಯ ಕುರಿತು ಕೆಲವೊಂದು ಪ್ರಮುಖ ಅಂಶಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ ನೂತನ ಶಾಸಕರ ಸ್ಥಾನಮಾನ ಹಾಗೂ ಸಚಿವ ಸ್ಥಾನದ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಕಟ್ಟಾ ಸುಬ್ರಮಣ್ಯ ನಾಯ್ಡು, ಆರ್. ಅಶೋಕ್, ಶ್ರೀರಾಮುಲು, ಶೋಭಾ ಕರಂದ್ಲಾಜೆ, ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್, ರೇವು ನಾಯ್ಕ, ಸಿ.ಎಂ. ಉದಾಸಿ, ಡಾ ವಿ.ಎಸ್ ಆಚಾರ್ಯ ಸೇರಿದಂತೆ ಒಟ್ಟು 15 ಸಂಭಾವ್ಯ ಸಚಿವರ ಪಟ್ಟಿಯನ್ನು ಬಿಜೆಪಿ ತಯಾರಿಸಿದೆ ಎಂದು ತಿಳಿದು ಬಂದಿದೆ.
|