ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲಾರಿ-ಟೆಂಪೋ ಡಿಕ್ಕಿ: 4 ಸಾವು  Search similar articles
ತುಮಕೂರು: ಲಾರಿ ಹಾಗೂ ಟೆಂಪೋ ಟ್ರ್ಯಾಕ್ಟ್ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಮಲ್ಲಸಂದ್ರ ಡೈರಿಯ ಬಳಿ ಮಂಗಳವಾರ ಸಂಭವಿಸಿದೆ.

ಗಾಯಗೊಂಡರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರಲ್ಲಿ ಪ್ರಕಾಶ್, ಸುರೇಶ್, ವೆಂಕಟೇಶ್ ಮತ್ತು ಕುಮಾರ್ ಎಂದು ಗುರುತಿಸಲಾಗಿದ್ದು, ಸತ್ತವರೆಲ್ಲರೂ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ವಾಸುದೇವ ಅವರಿಗೆ ಅಭಿನಂದನೆ ಸಲ್ಲಿಸಲು ಅದಲಗೆರೆಯಿಂದ ಟೇಂಪೋದಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿಯೂ ಗುಬ್ಬಿ ಕಡೆಯಿಂದ ತುಮಕೂರಿನ ಕಡೆ ಚಲಿಸುತ್ತಿದ್ದಾಗ ಸ್ಕಾರ್ಫಿಯೋ ವಾಹನವನ್ನು ಹಿಂದಿಕ್ಕಲು ಹೋಗಿ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಲಾರಿ ಚಾಲಕನ ಅಜಾಗರೂಕತೆಯೇ ಈ ದುರ್ಘಟನೆಗೆ ಕಾರಣ ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರೀಶೀಲನೆ ನಡೆಸಿದ್ದಾರೆ.
ಮತ್ತಷ್ಟು
ಜೆಡಿಎಸ್ ಶಾಸಕಾಂಗ ನಾಯಕರಾಗಿ ಕುಮಾರ
ಶ್ರೀಶೈಲಪ್ಪ ಗೆಲುವಿಕೆ ಘಂಟೆ ಬಾರಿಸಿದ ಯುವಕ
ಮೇ30ರಿಂದ ಶಾಲೆ ಪುನಾರಂಭ
ಧರಂ ಮಹಾರಾಷ್ಟ್ರ ರಾಜ್ಯಪಾಲ?
ಬಿಜೆಪಿಗೆ ಆರೂ ಪಕ್ಷೇತರರ ಬೆಂಬಲ
ಶುಕ್ರವಾರ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ